ಬಹು ನಿರೀಕ್ಷಿತ ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಹು ನಿರೀಕ್ಷಿತ ಹಾಗೂ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕಿಚ್ಚು ಹಚ್ಚಿದ್ದ ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಶಾಶ್ವತ ಹಿಂದುಳಿದ ಆಯೋಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ.

ಇಂದು ವಿಧಾನಸೌಧಕ್ಕೆ ತೆರಳಿದಂತ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು, ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಜಾತಿಗಣತಿ ವರದಿಯನ್ನು ಸಲ್ಲಿಸಿದರು. ತೀವ್ರ ವಿರೋಧದ ನಡುವೆಯೂ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಜಾತಿಗಣತಿ ವರದಿಯನ್ನು ಸ್ವೀಕರಿಸಿದರು.

ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲೇ ಇಂದು ಜಯಪ್ರಕಾಶ್ ಹೆಗ್ಡೆ ಅವರು ಜಾತಿಗಣತಿ ವರದಿಯನ್ನು ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *