ಬಾಂಗ್ಲಾದೇಶ ಚುನಾವಣೆ: 5ನೇ ಅವಧಿಗೆ ಪ್ರಧಾನಿಯಾಗಿ ಗೆದ್ದು ಬೀಗಿದ ಶೇಖ್ ಹಸೀನಾ

ಢಾಕಾ: ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಮತ್ತೊಮ್ಮೆ ಪ್ರಧಾನಿಯಾಗಿ ಮಿಂಚಲಿದ್ದಾರೆ. ಭಾನುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವರ ಪಕ್ಷ ಅವಾಮಿ ಲೀಗ್ 300 ಸ್ಥಾನಗಳಲ್ಲಿ ಮೂರನೇ ಎರಡರಷ್ಟು ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಶೇಖ್ ಹಸೀನಾ ಅವರು ಸತತ ಐದನೇ ಬಾರಿಗೆ ಪ್ರಧಾನಿಯಾಗಿ ಮರು ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.

ಚುನಾವಣಾ ಫಲಿತಾಂಶದಲ್ಲಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ 300 ಸಂಸದೀಯ ಸ್ಥಾನಗಳ ಪೈಕಿ 224 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಾಂಗ್ಲಾದೇಶದ ರಾಷ್ಟ್ರೀಯ ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು 62 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇತರರು ಒಂದು ಸ್ಥಾನವನ್ನು ಗೆದ್ದಿದ್ದಾರೆ.

ಶೇಖ್ ಹಸೀನಾ ಅವರು 2009 ರಿಂದ ಪ್ರಧಾನಿಯಾಗಿದ್ದಾರೆ. ಇದಕ್ಕೂ ಮುನ್ನ ಶೇಖ್ ಹಸೀನಾ ಅವರು 1991ರಿಂದ 1996ರವರೆಗೆ ಪ್ರಧಾನಿಯಾಗಿದ್ದರು. 76 ವರ್ಷದ ಶೇಖ್ ಹಸೀನಾ 249,965 ಮತಗಳನ್ನು ಪಡೆದರೆ, ಅವರ ಹತ್ತಿರದ ಪ್ರತಿಸ್ಪರ್ಧಿ ಮತ್ತು ಬಾಂಗ್ಲಾದೇಶ ಸುಪ್ರೀಂ ಪಾರ್ಟಿಯ ಎಂ ನಿಜಾಮ್ ಉದ್ದೀನ್ ಲಷ್ಕರ್ ಕೇವಲ 469 ಮತಗಳನ್ನು ಪಡೆದಿದ್ದಾರೆ.

Font Awesome Icons

Leave a Reply

Your email address will not be published. Required fields are marked *