ಬಾಲಿವುಡ್ ಸ್ಟಾರ್ ನಟ ರಣಬೀರ್‌ ಕಪೂರ್‌ಗೆ ಇಡಿ ನೋಟಿಸ್

ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ರಣ್​ಬೀರ್ ಕಪೂರ್ ಹೆಸರು ಕೇಳಿ ಬಂದಿದೆ. ರಣ್​ಬೀರ್​ಗೆ ಇಡಿ ಸಮನ್ಸ್ ಜಾರಿ ಮಾಡಿದ್ದು ಶೀಘ್ರವೇ ಉತ್ತರಿಸುವಂತೆ ಸೂಚಿಸಿದೆ. ಮಹಾದೇವ್‌ ಆನ್‌ಲೈನ್ ಬೆಟ್ಟಿಂಗ್‌ ಆಯಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ ದೇಶದ ಹಲವು ನಗರಗಳಲ್ಲಿ ಶೋಧ ಕಾರ್ಯ ನಡೆಸಿತ್ತು.

ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಮೂಲದ ಮಹಾದೇವ ಬೆಟ್ಟಿಂಗ್ ಆಯಪ್‌ ಮೂಲಕ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಕೋಲ್ಕತ್ತಾ, ಭೋಪಾಲ್, ಮುಂಬೈ ನಗರಗಳಲ್ಲಿ ಶೋಧ ನಡೆದಿತ್ತು. ದೊಡ್ಡ ಮಟ್ಟದ ಹವಾಲಾ ನಡೆದಿರುವ ಸಾಧ್ಯತೆಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌರಭ್ ಚಂದ್ರಕರ್ ಹಾಗೂ ರವಿ ಉಪ್ಪಾಲ ಅವರಿಂದ ₹417 ಕೋಟಿ ಮೊತ್ತದ ವರ್ಗಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಹಿಂದೆ ವಶಕ್ಕೆ ಪಡೆದಿದ್ದರು.

ದುಬೈನಲ್ಲಿ ನಡೆದ ಸೌರಭ್ ಚಂದ್ರಕರ್ ವಿವಾಹ ಕಾರ್ಯಕ್ರಮದಲ್ಲಿ ರಣಬೀರ್ ಕಪೂರ್‌ ಭಾಗಿಯಾಗಿದ್ದರು. ಸೌರಭ್ ಹಾಗೂ ರಣಬೀರ್ ನಡುವಿನ ಸಂಬಂಧ ಕುರಿತು ವಿಚಾರಣೆಗೆ ಅ.06ರಂದು ಹಾಜರಾಗುವಂತೆ ಇಡಿ ಸೂಚಿಸಿದೆ ಎಂದು ವರದಿಯಾಗಿದೆ.

Font Awesome Icons

Leave a Reply

Your email address will not be published. Required fields are marked *