ಬಿಎಂಡಬ್ಲ್ಯು ಸಿಇ 02 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಐಷಾರಾಮಿ ಬೈಕ್ ಉತ್ಪಾದನಾ ಕಂಪನಿಯಾಗಿರುವ ಬಿಎಂಡಬ್ಲ್ಯು ಮೋಟಾರ್‌ ಇಂಡಿಯಾತನ್ನ ಬಹುನೀರಿಕ್ಷಿತ ಸಿಇ 02 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಸ್ಕೂಟರ್ ಎಕ್ಸ್ ಶೋರೂಂ ಪ್ರಕಾರ ರೂ. 4.50 ಲಕ್ಷ ಬೆಲೆ ಹೊಂದಿದೆ. ಸಧಾರಿತ ತಂತ್ರಜ್ಞಾನದ ಜೊತೆಗೆ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಇವಿ ಸ್ಕೂಟರ್ ನೋಡಲು ಆಕರ್ಷಕವಾಗಿದ್ದು, ಮತ್ತೊಂದು ವಿಶೇಷವೆಂದರೆ ಹೊಸ ಇವಿ ಸ್ಕೂಟರ್ ಮಾದರಿಯು ಟಿವಿಎಸ್ ಮೋಟಾರ್ ಸಹಭಾಗಿತ್ವದೊಂದಿಗೆ ಭಾರತದಲ್ಲಿಯೇ ಉತ್ಪಾದನೆಗೊಳ್ಳಲಿದೆ.

ತಮಿಳುನಾಡಿನ ಹೊಸೂರಿನಲ್ಲಿರುವ ಟಿವಿಎಸ್ ದ್ವಿಚಕ್ರ ವಾಹನ ಉತ್ಪಾದನಾ ಘಟಕದಲ್ಲಿ ಹೊಸ ಇವಿ ಸ್ಕೂಟರ್ ಉತ್ಪಾದನೆಗಾಗಿ ಪ್ರತ್ಯೇಕ ಪ್ಲ್ಯಾಟ್ ಫಾರ್ಮ್ ತೆರೆಯಲಾಗಿದ್ದು, ಇದು ಇವಿ ತಂತ್ರಜ್ಞಾನದಲ್ಲಿ ಮುಂದುವರೆದ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ. ಸಿಇ 02 ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 3.92kWh ಬ್ಯಾಟರಿ ಪ್ಯಾಕ್ ನೀಡಲಾಗಿದ್ದು, ಇದು 11kW ಪವರ್ ಮತ್ತು 55 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಚಾರ್ಜ್ ಗೆ 108 ಕಿ.ಮೀ ಮೈಲೇಜ್ ನೀಡುತ್ತದೆ.

ಸಿಇ 02 ಸ್ಕೂಟರ್ ಒಟ್ಟು 142 ಕೆಜಿ ತೂಕದೊಂದಿಗೆ 160 ಸಿಸಿ ಬೈಕ್ ಮಾದರಿಗಳಿಗೆ ಸರಿಸಮನಾಗಿ ಪರ್ಫಾಮೆನ್ಸ್ ಹೊಂದಿದ್ದು, ಇದು ಪ್ರತಿ ಗಂಟೆಗೆ 95 ಕಿ.ಮೀ ಟಾಪ್ ಸ್ಪೀಡ್ ನೊಂದಿಗೆ ಕೇವಲ 3 ಸೆಕೆಂಡುಗಳಲ್ಲಿ ಸೊನ್ನೆಯಿಂದ 50 ಕಿ.ಮೀ ಸ್ಪೀಡ್ ಪಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ಹೀಗಾಗಿ ಇದು ನಗರಗಳಲ್ಲಿನ ಟ್ರಾಫಿಕ್ ದಟ್ಟಣೆಯ ನಡುವೆಯೂ ಅತ್ಯುತ್ತಮ ಪರ್ಫಾಮೆನ್ಸ್ ಗೆ ಸಹಕಾರಿಯಾಗಿದ್ದು, ಇದರಲ್ಲಿ ರೈಡಿಂಗ್ ಅನುಭವ ಹೆಚ್ಚಿಸಲು ಫ್ಲೋ, ಸರ್ಫ್ ಮತ್ತು ಫ್ಲ್ಯಾಶ್ ಎನ್ನುವ ಮೂರು ರೈಡಿಂಗ್ ಮೋಡ್ ಗಳನ್ನು ನೀಡಲಾಗಿದೆ.

 

Font Awesome Icons

Leave a Reply

Your email address will not be published. Required fields are marked *