ಬಿಗ್ ಬಾಸ್ ಮನೆಯಿಂದ ಹೊರ ಬಂದ ಪವಿ ಪೂವಯ್ಯ

ಬೆಂಗಳೂರು: ಈ ವಾರ ದೊಡ್ಮನೆಯ ಪಯಣ ಮುಗಿಸೋರು ಯಾರು ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಅಚ್ಚರಿಯನ್ನುವಂತೆ ಪವಿ ಪೂವಪ್ಪ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ದೊಡ್ಮನೆ ಪ್ರವೇಶ ಮಾಡಿದ್ದ ಪವಿ, ಇಷ್ಟು ಬೇಗ ಆಚೆ ಬರುತ್ತಾರೆ ಎಂದು ಯಾರು ಅಂದುಕೊಂಡಿರಲಿಲ್ಲ.

ಪವಿ ಪೂವಪ್ಪ ಮತ್ತು ಅವಿನಾಶ್ ಶೆಟ್ಟಿ ಇಬ್ಬರೂ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದರು. ಆನೆಯನ್ನು ಪಳಗಿಸಲು ಅವಿನಾಶ್ ಬಂದಿದ್ದಾರೆ ಎಂದೇ ಹೇಳಲಾಗಿತ್ತು. ಪವಿ ಪೂವಪ್ಪ ಮನೆಯ ಮಹಿಳಾ ಸದಸ್ಯರಿಗೆ ಮತ್ತಷ್ಟು ಉತ್ತೇಜ ನೀಡಲಿದ್ದಾರೆ ಎನ್ನುವ ನಂಬಿಕೆ ಇತ್ತು.

ಇವೆರಡೂ ಸುಳ್ಳಾಗಿವೆ. ಅವಿನಾಶ್ ತಾವು ಬಿಗ್ ಬಾಸ್ ಮನೆಗೆ ಯಾಕೆ ಬಂದಿದ್ದು ಎನ್ನುವುದನ್ನೇ ಮರೆತಿದ್ದಾರೆ. ಅತೀ ವೀಕ್ ಕಂಟೆಸ್ಟೆಂಟ್ ಆಗಿ ಬದಲಾಗಿದ್ದಾರೆ. ಪವಿ ಕಡಿಮೆ ಸಮಯದಲ್ಲೇ ಮನೆಯಿಂದ ನಿರ್ಗಮಿಸುತ್ತಿದ್ದಾರೆ. ಮೂಲಗಳ ಪ್ರಕಾರ ಪವಿ ಈ ವಾರ ಬಿಗ್ ಬಾಸ್ ಪಯಣ ಮುಗಿಸಿದ್ದಾರೆ ಎನ್ನಲಾಗ್ತಿದೆ.

 

Font Awesome Icons

Leave a Reply

Your email address will not be published. Required fields are marked *