ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ವಿರುದ್ಧ ದೂರು

ಬೀದರ್ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಜಾತಿಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ಎರಡು-ಮೂರು ಜಾತಿಗಳ ಮತ ಪಡೆದು ಆಟವಾಡುತ್ತಿದೆ ಎಂದು ಖೂಬಾ ಅವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಲಘುವಾಗಿ ಮಾತನಾಡಿದ್ದಾರೆ.

ಖೂಬಾ ಅವರು ಹೇಳಿದ ಆ ಜಾತಿಗಳು ಯಾವುವು. ಆ ಜಾತಿಗಳಿಗೆ ಬಿಜೆಪಿಯಲ್ಲಿ ಗೌರವ ಇದೆಯೋ, ಇಲ್ಲವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಖೂಬಾ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *