ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ 6 ತಿಂಗಳ ಜೈಲು ಶಿಕ್ಷೆ

ಪ್ರಯಾಗರಾಜ್: ​ 2012ರಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ 6 ತಿಂಗಳ ಜೈಲು ಶಿಕ್ಷೆಯಾಗಿದೆ. ಜೊತೆಗೆ ಸಾವಿರ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.

2012ರ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಕೋರ್ಟ್​ನ ನ್ಯಾಯಾಧೀಶ ಅಂಬರೀಶ್ ಕುಮಾರ್ ಶ್ರೀವಾಸ್ತವ ಶಿಕ್ಷೆಯನ್ನು ಪ್ರಕಟಿಸಿದ್ದಾರೆ.

ಶಿಕ್ಷೆ ಪ್ರಕಟವಾದ ಕೆಲವೇ ಹೊತ್ತಲ್ಲಿ ಅವರಿಗೆ ಜಾಮೀನು ಸಿಕ್ಕಿದೆ.

ಈ ಹಿಂದೆ ಜೋಶಿ ಕಾಂಗ್ರೆಸ್‌ನಲ್ಲಿದ್ದರು. ಲಕ್ನೋ ಕ್ಯಾಂಟ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪ್ರಚಾರ ನಡೆಸುತ್ತಿದ್ದರು. ಫೆಬ್ರವರಿ 17, 2012ರ ಸಂಜೆ ಬಹಿರಂಗ ಚುನಾವಣಾ ಪ್ರಚಾರ ಮುಗಿದ ನಂತರವೂ ರೀಟಾ ಬಹುಗುಣ ಜೋಶಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಈ ಬಗ್ಗೆ ವಿರೋಧ ಪಕ್ಷಗಳು ದೂರು ನೀಡಿದ್ದು, ನಂತರ ಪ್ರಕರಣ ದಾಖಲಾಗಿತ್ತು.

Font Awesome Icons

Leave a Reply

Your email address will not be published. Required fields are marked *