ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬಾಗಲಕೋಟೆ: ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯದ ಮಾಹಿತಿ ಪ್ರಕಾರ ಕುಮಾರೇಶ್ವರ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Font Awesome Icons

Leave a Reply

Your email address will not be published. Required fields are marked *