ಮಂಗಳೂರು: ನಗರದ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಕೆ. ಅವರ ಮನೆಗೆ ಶಾಸಕ ಅಶೋಕ್ ರೈ ಬೆಂಬಲಿಗರು ನುಗ್ಗಿ ಪುಂಡಾಟ ಮೆರೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿರುವ ಜಯಾನಂದ ಮನೆಗೆ ರೌಡಿಶೀಟರ್ ಪ್ರಜ್ವಲ್ ರೈ ಮತ್ತು ಕಾಂಗ್ರೆಸ್ ಬೆಂಬಲಿಗರು ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾರೆ. ಘಟನೆ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್ ನಡೆದಿದ್ದು ಪುತ್ತೂರು ಶಾಸಕರು ಅತೀ ಹೆಚ್ಚು ಅನುದಾನ ತಂದಿದ್ದಾರೆ ಅನ್ನೋ ಕುರಿತು ಸ್ಪಷ್ಟನೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಹಾಕಿದ್ದರು. ಇದೇ ವಿಚಾರಕ್ಕೆ ಶಾಸಕ ಅಶೋಕ್ ರೈ ಬೆಂಬಲಿಗರೆನ್ನಲಾದ ತಂಡವೊಂದು ಮನೆಗೆ ನುಗ್ಗಿ ದಾಂಧಲೆ ಮಾಡಿದೆ. ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಾರ್ ಶುರುವಾಗಿದೆ. ಚೆಂಡೆ ವಾಳಗದ ಮೂಲಕ ಕಾಂಗ್ರೆಸ್ ನ ಅನುದಾನದ ಬ್ಯಾನರ್ ಹಿಡಿದು ಬಿಜೆಪಿಯ ಜಯಾನಂದ ಅವರ ಮನೆಗೆ ನುಗ್ಗಿ ಪುಂಡಾಟ ಮೆರೆಯಲಾಗಿದೆ.
ಸದ್ಯ ಘಟನೆ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.