ಬಿಲ್ಕಿಸ್ ಬಾನು ಕೇಸ್: ಅಪರಾಧಿಗಳ ಬಿಡುಗಡೆ ಆದೇಶ ರದ್ದುಪಡಿಸಿದ ಸುಪ್ರೀಂ

ದೆಹಲಿ:‌ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಮಗು ಮತ್ತು ಕುಟುಂಬದವರನ್ನು ಕೊಂದ 11 ಅಪರಾಧಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯು ಮಾನ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅರ್ಜಿ ವಿಚಾರಣೆ ಮುಂದುವರಿಯುವುದು ಎಂದು ಸುಪ್ರೀಂ ಹೇಳಿದೆ. ಇದರ ಜತೆಗೆ ಅಪರಾಧಿಗಳನ್ನು ಮತ್ತೆ ಜೈಲಿಗೆ ಹಾಕುವಂತೆ ಹೇಳಿದೆ. ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಈ ಆದೇಶವನ್ನು ನೀಡಿದ್ದಾರೆ.

ಇನ್ನು ಗುಜರಾತ್ ಸರ್ಕಾರವು 11 ಅಪರಾಧಿಗಳ ಬಿಡುಗಡೆ ಮಾಡಲು ಸಮರ್ಥವಾಗಿಲ್ಲ ಎಂದು ಸುಪ್ರೀಂ ಹೇಳಿದ್ದು, ಈ ನಿರ್ಧಾರವು ಮಹಾರಾಷ್ಟ್ರ ಸರ್ಕಾರಕ್ಕೆ ಬಿಟ್ಟದ್ದು ಎಂದು ಹೇಳಿದೆ. ಈ ಬಿಡುಗಡೆ ಆದೇಶದಲ್ಲಿ ಸಾಮರ್ಥ್ಯದ ಕೊರತೆ ಇದೆ ಎಂದು ಕೋರ್ಟ್​​​ ಹೇಳಿದೆ. ಆ ಕಾರಣದಿಂದ ಈ ಬಿಡುಗಡೆ ಆದೇಶವನ್ನು ರದ್ದುಗೊಳಿಸುವುದಾಗಿ ಹೇಳಿದೆ.

2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು ಅಪರಾಧಿಗಳನ್ನು ಬಿಡುಗಡೆ ಮಾಡಿತು. ಈ ಆದೇಶವು ವಿರೋಧ ಪಕ್ಷ ಹಾಗೂ ಸಾವರ್ವಜನಿಕರ ಖಂಡನೆ ಹಾಗೂ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಅವರು ಸುಪ್ರೀಂ ಮೆಟ್ಟಿಲೇರಿದ್ದರು.

Font Awesome Icons

Leave a Reply

Your email address will not be published. Required fields are marked *