ಬಿಲ್ಕಿಸ್ ಬಾನೋ ಕೇಸ್:‌ 11 ಅಪರಾಧಿಗಳು ಗೋಧ್ರಾ ಉಪ ಜೈಲಿನಲ್ಲಿ ಶರಣು

ಗುಜರಾತ್: ಬಿಲ್ಕಿಸ್ ಬಾನೊ ಪ್ರಕರಣದ ಎಲ್ಲಾ 11 ಅಪರಾಧಿಗಳು ಭಾನುವಾರ (ಜ.22) ತಡರಾತ್ರಿ ಶರಣಾಗಿದ್ದಾರೆ. ಸುಪ್ರೀಂ ಕೋರ್ಟ್​ ಬಿಲ್ಕಿಸ್​ ಬಾನೋ ಅತ್ಯಾಚಾರ ಪ್ರಕರಣದ ಅಪರಾಧಿಗಳು ಶರಣಾಗಬೇಕು ಎಂದು ಗಡುವು ನೀಡಿತ್ತು. ಅದರಂತೆ 11 ಅಪರಾಧಿಗಳು ಕೂಡಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಸಬ್ ಜೈಲಿನಲ್ಲಿ ಶರಣಾಗಿದ್ದಾರೆ.

ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಸಮಯವನ್ನು ವಿಸ್ತರಿಸುವಂತೆ ಕೋರಿ ಪ್ರಕರಣದ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. 2002ರ ಗುಜರಾತ್‌ನ ಗೋದ್ರಾ ಗಲಭೆ ಸಂದರ್ಭದಲ್ಲಿ, ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನು ಮೇಲೆ ಈ ಕ್ರೂರಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಲಾಯಿತು.

Font Awesome Icons

Leave a Reply

Your email address will not be published. Required fields are marked *