ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥ

ಥಾಣೆ: ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಥಾಣೆಯಲ್ಲಿ ನಡೆದಿದೆ. 63 ಬಾಲಕಿಯರು ಸೇರಿದಂತೆ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಥಾಣೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ನಡೆದ ಸಂತ ಗಡ್ಗೆ ಮಹಾರಾಜ್ ಪ್ರಾಥಮಿಕ ಮತ್ತು ಮಾಧ್ಯಮಿಕ ಆಶ್ರಮ ಶಾಲೆ, ಮುಂಬೈನ ಹೊರವಲಯದಲ್ಲಿರುವ ಶಹಾಪುರ ತಾಲೂಕಿನ ಭಟ್ಸಾಯಿಯಲ್ಲಿದೆ. ಶಾಲೆಯಲ್ಲಿ 1 ರಿಂದ 10 ನೇ ತರಗತಿಯ 200 ವಿದ್ಯಾರ್ಥಿಗಳು ಇದ್ದಾರೆ. ನಾಲ್ವರು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲರನ್ನೂ ಚಿಕಿತ್ಸೆ ನಂತರ ಶಹಾಪುರದ ಉಪವಿಭಾಗದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಶಹಾಪುರ ತಹಸೀಲ್ದಾರ್ ಕೋಮಲ್ ಠಾಕೂರ್ ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *