ಬೀದರ್‌ನಲ್ಲಿ ಚರಂಡಿ, ರಸ್ತೆ ನಿರ್ಮಿಸುವಂತೆ ಆಗ್ರಹ

ಹುಮನಾಬಾದ್‌: ತಾಲ್ಲೂಕಿನ ಹುಡಗಿ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿಯುವ ಕೊಳಚೆ ನೀರು, ಸಿಸಿ ರಸ್ತೆಗಳು, ನಿಯಂತ್ರಣಕ್ಕೆ ಬಾರದ ಬಹಿರ್ದೆಸೆ ಹಾಗೂ ಸ್ವಚ್ಛತೆಯ ಸಮಸ್ಯೆಯಿಂದ ಗ್ರಾಮಸ್ಥರು ಪರದಾಡುವಂತಾಗಿದೆ. ಗ್ರಾಮದಲ್ಲಿ ಈವರೆಗೂ ಸೂಕ್ತ ಚರಂಡಿ ವ್ಯವಸ್ಥೆಯಾಗಿಲ್ಲ.

ಅಲ್ಲದೇ ಗ್ರಾ.ಪಂ.ಸಿಬ್ಬಂದಿ, ಅಧಿಕಾರಿಗಳು ಚರಂಡಿಯಲ್ಲಿನ ತ್ಯಾಜ್ಯ ವಿಲೇವಾರಿಗೆ ಕ್ರಮಕೈಗೊಂಡಿಲ್ಲ. ಹೀಗಾಗಿ ಕೊಳಚೆ ನೀರು ಹರಿಯಲು ಸೂಕ್ತ ವ್ಯವಸ್ಥೆಯಿಲ್ಲದೇ ರಸ್ತೆ ಮೇಲೆಯೇ ಹರಿಯುತ್ತಿದೆ. ಕೊಳಚೆ ನೀರು ಖಾಲಿ ನಿವೇಶನಗಳಲ್ಲಿ ಸಂಗ್ರಹಗೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗುತ್ತಿವೆ. ಸೊಳ್ಳೆಗಳಿಂದಾಗಿ ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಶೀಘ್ರದಲ್ಲೇ ಚರಂಡಿಗಳಲ್ಲಿ ನೀರು ಹರಿಯುವಂತೆ ಕ್ರಮಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮದಲ್ಲಿ ಬಹುತೇಕರು ಸ್ವಚ್ಛಗ್ರಾಮ ಯೋಜನೆ ಅಡಿಯಲ್ಲಿ ತಮ್ಮ ಮನೆಗಳಲ್ಲೇ ಶೌಚಾಲಯಗಳನ್ನು ನಿರ್ಮಿಸಿಕೊಂಡಿದ್ದಾರೆ. ಜತೆಗೆ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯಗಳನ್ನೂ ನಿರ್ಮಿಸಲಾಗಿದೆ. ಆದರೂ ಗ್ರಾಮಸ್ಥರು ಮಾತ್ರ ಅವುಗಳನ್ನು ಬಳಸದೇ ಬಹಿರ್ದಸೆಗೆಂದು ತೆರಳುತ್ತಾರೆ. ಹೀಗಾಗಿ ಗ್ರಾ.ಪಂ. ಸಿಬ್ಬಂದಿ ಹಾಗೂ ಅಧಿಕಾರಿಗಳು, ಗ್ರಾಮಸ್ಥರಲ್ಲಿ ಶೌಚಾಲಯ ಬಳಕೆ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸಬೇಕು ಎಂದು ಶಶಿಕುಮಾರ್ ಒತ್ತಾಯಿಸಿದ್ದಾರೆ

Font Awesome Icons

Leave a Reply

Your email address will not be published. Required fields are marked *