ಬೆಂಗಳೂರಿಗೆ ಬರಲಿದೆ ಚಾಲಕ ರಹಿತ ಮೆಟ್ರೋ

ಬೆಂಗಳೂರು: ಇಲೆಕ್ಟ್ರಾನಿಕ್ಸ್ ಸಿಟಿಗೆ ಮೊದಲ ಚಾಲಕ ರಹಿತ ರೈಲು ಚೀನಾದಿಂದ ಹೊರಟಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್  ಅಧಿಕಾರಿಗಳು ಎಲೆಕ್ಟ್ರಾನಿಕ್ಸ್ ಸಿಟಿ ಮೆಟ್ರೋಗೆ ಮೊದಲ ಆರು ಬೋಗಿಗಳ ರೈಲನ್ನು ಜನವರಿ 20 ರಂದು ಹಡಗಿಗೆ ಲೋಡ್ ಮಾಡಲಾಗಿದ್ದು, ಹಡಗು ಮೆಟ್ರೋ ರೈಲು ಹೊತ್ತು ಸದ್ಯ ಚೆನ್ನೈನತ್ತ ತೆರಳುತ್ತಿದೆ.

ಈ ಮೂಲಕ ಚಾಲಕ ರಹಿತ ಮೆಟ್ರೋ ರೈಲು ಬೆಂಗಳೂರಿನಲ್ಲಿ ಆರಂಭಗೊಳ್ಳುತ್ತಿದೆ. ಇದರೊಂದಿಗೆ ನಮ್ಮ ಮೆಟ್ರೋ ಹಳದಿ ಕಾರಿಡಾರ್ ಹೊಸ ಇತಿಹಾಸ ರಚಿಸಲು ಸಜ್ಜಾಗಿದೆ.

ಇದು 2024 ರ ಮಧ್ಯ ಅಥವಾ ಫೆಬ್ರವರಿ ಅಂತ್ಯದ ವೇಳೆಗೆ ಚೆನ್ನೈ ಬಂದರಿಗೆ ಆಗಮಿಸುವ ನಿರೀಕ್ಷೆಯಿದೆ. ನಂತರ ಚೆನ್ನೈನಿಂದ ರಸ್ತೆ ಮೂಲಕ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಸಾಗಿಸಲಾಗುತ್ತದೆ.

ಈ ಚಾಲಕ ರಹಿತ ಮೆಟ್ರೋ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಜೋಡಣೆ ಮಾಡಿದ ಬಳಿಕ ಎಲೆಕ್ಟ್ರಾನಿಕ್ಸ್ ಸಿಟಿ-ಆರ್‌ವಿ ರಸ್ತೆಗೆ ಸಂಪರ್ಕಿಸುವ 19-ಕಿಮೀ ಹಳದಿ ಮಾರ್ಗದಲ್ಲಿ ಓಡಾಡಲಿದ್ದು, ಸೆಪ್ಟೆಂಬರ್ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.

ಚಾಲಕ ಇರದಿದ್ದರೂ ಈಗಾಗಲೇ ಅಳವಡಿಸಲಾದ ಪ್ರೋಗ್ರಾಂ ಆಧಾರದ ಮೇಲೆ ರೈಲು ಸಂಚರಿಸಲಿದೆ. ರೈಲಿನ ಸಂಚಾರವನ್ನು ಕಂಟ್ರೋಲ್‌ ರೂಮ್​ನಲ್ಲಿ ನಿಗಾ ವಹಿಸಲಾಗುತ್ತದೆ. ಚಾಲಕ ಇಲ್ಲದೇ ಈ ಮೆಟ್ರೋ ಗಂಟೆಗೆ 80 ಕಿ.ಮೀ. ವೇಗದಲ್ಲಿ ಚಲಿಸಲಿದೆ.

Font Awesome Icons

Leave a Reply

Your email address will not be published. Required fields are marked *