ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯರ ವಿರೋಧ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೇಟ್‌ ಸಿಗುವುದು ಖಚಿತವಾಗುತ್ತಿದ್ದಂತೆ ಜಿಲ್ಲೆಯ ಸ್ಥಳೀಯರು ಶೆಟ್ಟರ್‌ ಸ್ಪರ್ಧೆಗೆ ಬಾರಿ ವಿರೋಧ ವ್ಯಕ್ತವಾಗಿದೆ.ಶೆಟ್ಟರ್‌ ಬದಲು ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿಸದ್ದಾರೆ.ಅಲ್ಲದೇ ಈ ಕುರಿತು ಮೇಲ್ವಿಚಾರಕರನ್ನು ಬೇಟಿಯಾಗಿ ಅವರಲ್ಲಿ ಮನವಿ ಸಲ್ಲಿಸುವುದಕ್ಕೆ ಮುಂದಾಗಿದ್ದಾರೆ. ಇದೂ ಕೈಹಿಡಿಯಲಿಲ್ಲ ಎಂದರೆ ದೆಹಲಿಗೆ ತೆರಳಿ ಹೈಕಮಾಂಡ್‌ ಅವರನ್ನು ಬೇಟಿ ಮಾಡುವುದಾಗಿ ಸ್ಥಳೀಯ ನಾಯಕರು ತಿಳಿಸಿದ್ದಾರೆ.

ಇದೀಗ ಸ್ಥಳೀಯ ನಾಯಕರು ಈಗಾಗಲೇ ಸಾಂಬ್ರ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ತೆರಳಿದ್ದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸರವಾಲ್, ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರನ್ನು ಮಾಡಲಿದ್ದಾರೆ ಹಾಗೂ ಶೆಟ್ಟರ್ ಬದಲು ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಲಿದ್ದಾರೆ. ಬೇಟಿ ನಂತರದಲ್ಲಿ ಯವುದೇ ತಿರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *