ಬೈಕ್‌ಗೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು

ತುಮಕೂರು: ತುಮಕೂರು  ಜಿಲ್ಲೆ ಹುಲಿಯೂರು ದುರ್ಗದಲ್ಲಿ ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಚನ್ನಪಟ್ಟಣ ಮೂಲದ ಅಮಾನುತುಲ್ಲಾ ಖಾನ್ (60), ಮುನಾವರ್ (50) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಈ ಇಬ್ಬರು ಬೈಕ್ ಸವಾರರು ಕಳೆದ ರಾತ್ರಿ ಹುಲಿಯೂರು ದುರ್ಗದ ಕಡೆಯಿಂದ ಚನ್ನಪಟ್ಟಣದ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಸವಾರರು ರಸ್ತೆಯಲ್ಲಿ ಬಿದ್ದಿದ್ದು, ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *