ಭರದಿಂದ ಸಾಗುತ್ತಿದೆ ರೂಪೇಶ್‌ ಶೆಟ್ಟಿ ನಟನೆಯ ಆಧಿಪತ್ರ ಶೂಟಿಂಗ್‌

ಮಂಗಳೂರು: ನಟ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾದ ಶೂಟಿಂಗ್ ಭರಾಟೆ ಜೋರಾಗಿದೆ. ಚಿತ್ರತಂಡ ಕುಂದಾಪುರದ ಕೆರಾಡಿ ಭಾಗದಲ್ಲಿ ಚಿತ್ರೀಕರಣ ನಡೆಯುತ್ತಿದೆ.

ಈಗಾಗಲೇ 10 ದಿನ ಶೂಟಿಂಗ್ ಕಂಪ್ಲೀಟ್ ಮಾಡಿದ್ದು, ನಾಯಕ ರೂಪೇಶ್ ಖಾಕಿ ಖದರ್ ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು.

ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ. ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ.

ರೂಪೇಶ್‌ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಚಯನ್ ಶೆಟ್ಟಿ  ಅಧಿಪತ್ರ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ.

Font Awesome Icons

Leave a Reply

Your email address will not be published. Required fields are marked *