ಭಾರತ- ಅಫ್ಘಾನಿಸ್ತಾನ ನಡುವಿನ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲುವು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ (ಜ. 17) ರಂದು ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರನೇ ಹಾಗೂ ಅಂತಿಮ ಟಿ20 ಪಂದ್ಯವನ್ನು 10 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅಫ್ಘಾನಿಸ್ತಾನಕ್ಕೆ 213 ರನ್ ಟಾರ್ಗೆಟ್ ನೀಡಿತ್ತು. ಅಫ್ಘಾನಿಸ್ತಾನ ತಂಡ ಕೂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಹೀಗಾಗಿ ಪಂದ್ಯ ಟೈ ಆಯಿತು. ಮೊದಲ ಸೂಪರ್​ ಓವರ್​ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 6 ಎಸೆತಗಳಲ್ಲಿ 16 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಭಾರತ ಕೂಡ 6 ಎಸೆತಗಳಲ್ಲಿ 16 ರನ್ ಕಲೆಹಾಕಿತು. ಹೀಗಾಗಿ ಪಂದ್ಯ ಎರಡನೇ ಬಾರಿಯೂ ಟೈ ಆಯಿತು. ಆದ್ದರಿಂದ ಪಂದ್ಯ ಮತ್ತೊಮ್ಮೆ ಸೂಪರ್​ ಓವರ್​ಗೆ ಸಾಗಿತು.

ಈ ವೇಳೆ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಮೊದಲ ಐದು ಎಸೆತಗಳಲ್ಲಿ 2 ವಿಕೆಟ್ ಕಳೆದುಕೊಂಡು 11 ರನ್ ಕಲೆಹಾಕಿತು. ಈ ಮೂಲಕ ಅಫ್ಘಾನಿಸ್ತಾನಕ್ಕೆ 12 ರನ್ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಅಫ್ಘಾನ್ ಮೊದಲ ಮೂರು ಎಸೆತಗಳಲ್ಲಿ 1 ರನ್ ಬಾರಿಸಿ ಎರಡು ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಭಾರತ 10 ರನ್​ಗಳಿಂದ ಪಂದ್ಯವನ್ನು ಗೆದ್ದು ಬೀಗಿದೆ.

Font Awesome Icons

Leave a Reply

Your email address will not be published. Required fields are marked *