ಭಾರತ-ಸೌತ್ ಆಫ್ರಿಕಾ ನಡುವೆ ಇಂದು ಫೈನಲ್ ಫೈಟ್

ದುಬೈ: ಭಾರತ-ಸೌತ್ ಆಫ್ರಿಕಾ ನಡುವಣ ಮೂರನೇ ಟಿ20 ಪಂದ್ಯವು ಇಂದು (ಡಿ.21) ನಡೆಯಲಿದೆ. ಪಾರ್ಲ್​​ನ ಬೋಲ್ಯಾಂಡ್ ಪಾರ್ಕ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಸರಣಿ ನಿರ್ಣಾಯಕ.

ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ಭರ್ಜರಿ ಗೆಲುವು ದಾಖಲಿಸಿತು. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ.

ಭಾರತ-ಸೌತ್ ಆಫ್ರಿಕಾ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ 93 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 51 ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡವೇ ಜಯ ಸಾಧಿಸಿದೆ. ಇನ್ನು ಟೀಮ್ ಇಂಡಿಯಾ ಗೆದ್ದಿರುವುದು 39 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.

ಸೌತ್ ಆಫ್ರಿಕಾ ತಂಡ: ರೀಝ ಹೆಂಡ್ರಿಕ್ಸ್, ಟೋನಿ ಡಿ ಜೊರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್ , ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ, ಲಿಝಾಡ್ ವಿಲಿಯಮ್ಸ್, ವಿಯಾನ್ ಮುಲ್ಡರ್, ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮಿಹ್ಲಾಲಿ ಎಂಪೊಂಗ್ವಾನಾ, ಕೈಲ್ ವೆರ್ರೆನ್ನೆ.

ಭಾರತ ತಂಡ: ರಜತ್ ಪಾಟಿದಾರ್, ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್, ಯುಜ್ವೇಂದ್ರ ಚಹಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಆಕಾಶ್ ದೀಪ್.

 

 

Font Awesome Icons

Leave a Reply

Your email address will not be published. Required fields are marked *