ಭಾರಿ ಅಗ್ನಿ ಅವಘಡ: ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ತೈಲ ಟ್ಯಾಂಕರ್

ಲುಧಿಯಾನ: ಪಂಜಾಬ್’ನ ಲುಧಿಯಾನದ ಖನ್ನಾ ಪ್ರದೇಶದ ಬಳಿಯ ಫ್ಲೈಓವರ್ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟವಾದ, ಕಪ್ಪು ಹೊಗೆ ಎಲ್ಲೆಡೆ ಆವರಿಸಿಕೊಂಡಿದೆ.

ಖನ್ನಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂಧನ ಟ್ಯಾಂಕ್’ಗೆ ಬೆಂಕಿ ಹೊತ್ತಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಇದರಿಂದಾಗಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿದೆ. ಇನ್ನು ತೈಲ ಟ್ಯಾಂಕರ್ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದೇ ಬೆಂಕಿಗೆ ಕಾರಣ ಎನ್ನಲಾಗ್ತಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಳತಾಣದಲ್ಲಿ ವೈರಲ್‌ ಆಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಧಳ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಸದ್ಯ ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.

Font Awesome Icons

Leave a Reply

Your email address will not be published. Required fields are marked *