ಭೀಕರ ರಸ್ತೆ ಅಪಘಾತ: 13 ಪ್ರಯಾಣಿಕರು ಸಜೀವ ದಹನ

ಮಧ್ಯಪ್ರದೇಶ:  ಬಸ್ ಡಂಪರ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಪ್ರಯಾಣಿಕರು ಸಜೀವ ದಹನವಾಗಿದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಸಂಭವಿಸಿದೆ.

ಭೀಕರ ಅಪಘಾತದಲ್ಲಿ ಗಾಯಗೊಂಡ 18 ಕ್ಕೂ ಹೆಚ್ಚು ಜನರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ.

11 ಪ್ರಯಾಣಿಕರ ಸಾವನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ಖಾಸಗಿ ಬಸ್ಸಿನಲ್ಲಿ 45 ಪ್ರಯಾಣಿಕರಿದ್ದರು. ಸತ್ತವರ ಸಂಖ್ಯೆ ಹೆಚ್ಚಾಗಬಹುದು ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಮೃತರನ್ನು ಗುರುತಿಸಲಾಗಿಲ್ಲ ಎಂದು ಕಲೆಕ್ಟರ್ ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಹಲವರ ಸ್ಥಿತಿ ಗಂಭೀರವಾಗಿದೆ. ಎಂದು ಗುನಾ ಜಿಲ್ಲಾಧಿಕಾರಿ ತರುಣ್ ರಾಠಿ ತಿಳಿಸಿದ್ದಾರೆ.

ಗುನಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಆದೇಶಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *