ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್​ ಸಂದೇಶಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿದೆ.

ಡಿಸೆಂಬರ್ 26ರಂದು ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ [email protected] ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿತ್ತು. ಈ ಸಂಬಂಧ ಅದಾನಿ ಆಡಳಿತದ ಮಂಗಳೂರು ಏರ್ಪೋರ್ಟ್ ಸಂಸ್ಥೆ ಬಜಪೆ ಠಾಣೆಗೆ ದೂರು ನೀಡಿತ್ತು. ಇದೀಗ ನ್ಯಾಯಾಲಯದ ಅನುಮತಿ ಪಡೆದುಕೊಂಡು ಐಪಿಸಿ 507 ಅಡಿ‌ ಪ್ರಕರಣ ದಾಖಲಾಗಿದೆ.

ಇನ್ನು ಇದೇ ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ [email protected] ಮೇಲ್ ಐಡಿಯಿಂದ ಡಿಸೆಂಬರ್ 26ರಂದು ಬೆದರಿಕೆ ಸಂದೇಶ ಬಂದಿತ್ತು. ‘FUNING’ ಎಂಬ ಉಗ್ರಗಾಮಿ ಸಂಘಟನೆ ಎಂದು ಘೋಷಿಸಿಕೊಂಡು ಬೆದರಿಕೆ ಹಾಕಲಾಗಿತ್ತು. ಕೊನೆಗೆ ಇದೊಂದು ಹುಸಿ ಬಾಂಬ್ ಕರೆ ಎಂದು ಖಾತ್ರಿಯಾಗಿತ್ತು. ಬಳಿಕ ಮಂಗಳೂರು ವಿಮಾನ ನಿಲ್ದಾಣ ಆಡಳಿ ಮಂಡಳಿ ಈ ಬಗ್ಗೆ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಇದೀಗ ನ್ಯಾಯಾಲಯದ ಅನುಮತಿಯಿಂದ ಐಪಿಸಿ 507 ಅಡಿ‌ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

Font Awesome Icons

Leave a Reply

Your email address will not be published. Required fields are marked *