ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ಗೆ ಗೌರವ ಡಾಕ್ಟರೇಟ್ ಪ್ರದಾನ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಹೈದರಾಬಾದ್​ನಲ್ಲಿರೋ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್​ಸ್ಟಿಟ್ಯೂಟ್​​ ಗೌರವ ಡಾಕ್ಟರೇಟ್ ನೀಡಿ ಗೌರವ ಸಲ್ಲಿಸಿದೆ. ಈ ಬಗ್ಗೆ ಖುದ್ದು ಸಂಸದೆ ಸುಮಲತಾ ಅಂಬರೀಶ್ ಅವರೇ ಪೋಸ್ಟ್​​​ ಹಾಕಿದ್ದಾರೆ.

ಸಮಾಜ ಸೇವೆ ಮತ್ತು ರಾಜಕೀಯ ಮತ್ತು ಚಲನಚಿತ್ರಗಳಲ್ಲಿ ಸೇವೆಗಾಗಿ USA, ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಹೈದರಾಬಾದ್‌ನಿಂದ ಗೌರವ ಡಾಕ್ಟರೇಟ್ ಪಡೆದಿರುವುದಕ್ಕೆ ಅತ್ಯಂತ ವಿನಮ್ರ ಮತ್ತು ಗೌರವ ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುವೆ. ಈ ಗೌರವ ನನ್ನ ಮುಂದಿನ ಹಾದಿಯಲ್ಲಿ ನನ್ನನ್ನು ಪ್ರೇರೇಪಿಸಲು ಇದು ಸ್ಫೂರ್ತಿಯಾಗಲಿದೆ. ನಾನು ಈ ಗೌರವವನ್ನು ನನ್ನ ಪತಿ ಅಂಬರೀಶ್, ನನ್ನ ಹೆತ್ತವರು ಮತ್ತು ನನ್ನ ಹಿತೈಷಿಗಳು ಮತ್ತು ಚಲನಚಿತ್ರ ಉದ್ಯಮ ಮತ್ತು ರಾಜಕೀಯ ಬೆಂಬಲಿಗರಿಗೆ ಅರ್ಪಿಸುತ್ತೇನೆ. ಇಂಥದ್ದೊಂದು ಗೌರವ ಸಿಕ್ಕಿರುವುದು ನನ್ನ ಮೇಲಿನ ನಂಬಿಕೆ ಮತ್ತು ನಿಮ್ಮೆಲ್ಲರ ಆಶೀರ್ವಾದ ಕಾರಣ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *