ಮಕ್ಕಳ ಹಕ್ಕುಗಳ ಆಯೋಗ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು: 2024ರ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಕಾರ್ಯ ಹಾಗೂ ಪ್ರಚಾರ  ಕಾರ್ಯಗಳಲ್ಲಿ 18 ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ. ಭಾರತ ಸರ್ಕಾರವು ವಿಶ್ವಸಂಸ್ಥೆಯ ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆ, 1992ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದೆ.

ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015ರ ಅನ್ವಯ  18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿತವಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ, ಮಕ್ಕಳು ಕಾರ್ಯ ನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18  ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ. ಆದಾಗ್ಯೂ ಮಕ್ಕಳನ್ನು ಚುನವಣಾ ಕಾರ್ಯದಲ್ಲಿ ಬಳಸಿಕೊಂಡಲ್ಲಿ, ಕಾಯ್ದೆಯನ್ವಯ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *