ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ನವಲಗುಂದ: ಲೋಕಸಭಾ ಚುನಾವಣೆ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರು ಆದ ಸ್ವರೂಪಾ ಟಿ.ಕೆ ಅವರು ತಾಲ್ಲೂಕಾ ಪಂಚಾಯತಿ ಆವರಣದಲ್ಲಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಆಮಿಷಕ್ಕೆ ಒಳಗಾಗದೆ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಲ್ಲರೂ ಮತದಾನ ಪ್ರಕ್ರಿಯೆ ಪಾಲ್ಗೊಂಡು ನೂರರಷ್ಟು ಮತದಾನ ಮಾಡಿದರೆ ಮಾತ್ರ ಪ್ರಜಾ ಪ್ರಭುತ್ವದ ಪ್ರಾಮುಖ್ಯತೆಗೆ ಅರ್ಥ ಬರುತ್ತದೆ ಎಂದರು.

ನಂತರ ಪಟ್ಟಣದ ವಿವಿಧ ಬೀದಿಗಳಲ್ಲಿ ಜಾಥಾ ನಡೆಸಿ ಸಾರ್ವಜನಿಕವಾಗಿ ಕಡ್ಡಾಯ ಮತದಾನ ಮಾಡುವ ಘೋಷಣೆಗಳ ಮೂಲಕ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.

ತಾಪಂಸಹಾಯಕ ನಿರ್ದೆಶಕರಾದ ಹರ್ಷವರ್ಧನ ಹಂಚಿನಾಳ, ಜಗದೀಶ್ ಹಡಪದ, ಕ್ಷೇತ್ರಶಿಕ್ಷಣಾಧಿಕಾರಿ ಶಿವಾನಂದ ಮಲ್ಲಾಡ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾಗನೂರ, ಎಸ್ ಬಿ.ತೋಟದ, ವಿರೇಶ ಗುಡದೂರಮಠ, ತೋಟಗಾರಿಕೆ ಇಲಾಖೆಯ ಸಂಜೀವಕುಮಾರ ಸೇರಿದಂತೆ ತಾ.ಪಂಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಇತರರು ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *