ಮತ್ತೆ ಜೋಡಿಯಾಗಿ ಕಾಣಿಸಲಿದ್ದಾರೆ ರಶ್ಮಿಕಾ ವಿಜಯ್​

ಬೆಂಗಳೂರು: ವೃತ್ತಿಜೀವನದಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ  ಅವರು ಈಗ ಅವರು ಮೂರನೇ ಬಾರಿಗೆ ತೆರೆ ಹಂಚಿಕೊಳ್ಳತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್​ ಆಗಿದೆ.

‘ಫ್ಯಾಮಿಲಿ ಸ್ಟಾರ್​’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಿದ್ದು, ಈಗ ಈ ಸಿನಿಮಾದ ಪಾತ್ರವರ್ಗಕ್ಕೆ ರಶ್ಮಿಕಾ ಮಂದಣ್ಣ ಕೂಡ ಸೇರ್ಪಡೆಗೊಂಡಿದ್ದಾರೆ. ಈ ಸಿನಿಮಾದ ಒಂದು ಹಾಡಿನಲ್ಲಿ ಮೃಣಾಲ್​ ಠಾಕೂರ್​, ವಿಜಯ್​ ದೇವರಕೊಂಡ, ರಶ್ಮಿಕಾ ಮಂದಣ್ಣ ಅವರು ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ.

ರಶ್ಮಿಕಾ ಮಂದಣ್ಣ ವಿಜಯ್​ ದೇವರಕೊಂಡ ಜೊತೆ ನಟಿಸಿದ ಮೊದಲ ಸಿನಿಮಾ ‘ಗೀತ ಗೋವಿದಂ’ ಹಿಟ್​ ಆಗಿತ್ತು. ಆ ಬಳಿಕ ಅವರಿಬ್ಬರು ‘ಡಿಯರ್​ ಕಾಮ್ರೇಡ್​’ ಸಿನಿಮಾದಲ್ಲಿ ಮತ್ತೊಮ್ಮೆ ಜೋಡಿಯಾಗಿ ನಟಿಸಿದ್ದರು. ಈಗ ಮೂರನೇ ಬಾರಿಗೆ ಅವರನ್ನು ಜೊತೆಯಾಗಿ ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

Font Awesome Icons

Leave a Reply

Your email address will not be published. Required fields are marked *