ಮತ್ತೊಂದು ವಿದ್ಯಾ ಸಂಸ್ಥೆಗೆ ಬಾಂಬ್ ಬೆದರಿಕೆ ಸಂದೇಶ !

 ಬೆಂಗಳೂರು: ನಗರದ ಮತ್ತೊಂದು ವಿದ್ಯಾ ಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿದೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರೀಯ ವಿದ್ಯಾಲಯ ಒಂದರಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಬಂದಿದೆ.

[email protected] ಮೇಲ್​​ನಿಂದ ಬೆದರಿಕೆ ಹಾಕಲಾಗಿದೆ. ಸ್ಕೂಲ್ ಒಳಗೆ ಬಾಂಬ್ ಇಟ್ಟಿದ್ದೀವಿ ಬೆಳಗ್ಗೆ 10:20ಕ್ಕೆ ಬ್ಲಾಸ್ಟ್ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಬೆದರಿಕೆ ಮೇಲ್ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಭದ್ರತಾ ಅಧಿಕಾರಿಗಳು, ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಆದರೆ ಅಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಹುಸಿ ಬಾಂಬ್ ಬೆದರಿಕೆ ಕೇಸ್ ದಾಖಲಿಸಿಕೊಂಡು ತನಿಕೆ ಆರಂಭಿಸಿದ್ದಾರೆ. ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

Font Awesome Icons

Leave a Reply

Your email address will not be published. Required fields are marked *