ಚಿಲಿ: ಮಧ್ಯ ಚಿಲಿಯಲ್ಲಿ ಹರಡಿದ ಕಾಡ್ಗಿಚ್ಚಿನ ಪರಿಣಾಮ ಕನಿಷ್ಠ 46 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಹೇಳಿದ್ದಾರೆ.
ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಿವಾಸಿಗಳು ವಾಸಿಸುವ ವಾಲ್ಪಾರೈಸೊ ಎನ್ನುವ ಪ್ರದೇಶದಲ್ಲಿ ಕಾಡ್ಗಿಚ್ಚು ಹರಡಿದ್ದು, ಅಗ್ನಿಶಾಮಕ ಸಿಬ್ಬಂದಿ ಹೆಲಿಕಾಪ್ಟರ್ ಮತ್ತು ಟ್ರಕ್‌ಗಳನ್ನು ಬಳಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ.