ಮಲಯಾಳಂ ಸಿನಿಮಾ ನಟಿ ಅಪರ್ಣಾ ನಾಯರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ತಿರುವನಂತಪುರಂ: ಮಲಯಾಳಂ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಯಾಗಿದ್ದ ಅಪರ್ಣಾ ನಾಯರ್ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

33 ವರ್ಷದ ಅಪರ್ಣಾ ಗುರುವಾರ ರಾತ್ರಿ ಕರಮಾನ ಬಳಿಯ ತನ್ನ ನಿವಾಸದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಪರ್ಣಾ ತನ್ನ ಪತಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪರ್ಣಾ ನಾಯರ್​ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕೇಸ್​ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೇಘತೀರ್ಥಂ’, ‘ಮುದುಗೌ’, ‘ಅಚಾಯನ್ಸ್​’, ‘ಕಲ್ಕಿ’, ‘ಕೊಡತಿ ಸಮಕ್ಷಂ ಬಾಲನ್​ ವಕೀಲ್​’ ಸೇರಿದಂತೆ ಮಲಯಾಳಂನ ಅನೇಕ ಸಿನಿಮಾಗಳಲ್ಲಿ ಅಪರ್ಣಾ ನಾಯರ್​ ಅವರು ನಟಿಸಿದ್ದಾರೆ. ಹಲವು ಟಿವಿ ಸೀರಿಯಲ್​ಗಳಲ್ಲೂ ಅವರು ಅಭಿನಯಿಸಿದ್ದಾರೆ. ಆ ಮೂಲಕ ಮಲಯಾಳಂ ಸಿನಿಮಾ ಪ್ರೇಕ್ಷಕರಿಗೆ ಅವರು ಪರಿಚಿತರಾಗಿದ್ದರು.

Font Awesome Icons

Leave a Reply

Your email address will not be published. Required fields are marked *