ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

ಚೆನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಬಾವ ಮಹದೇವಯ್ಯ ಪಿ. ಅವರ ಕೊಲೆ ಪ್ರಕರಣದ ತನಿಖೆಯನ್ನು ಸರ್ಕಾರ ಇಂದು (ಡಿ. 28) ರಂದು ಸಿಐಡಿಗೆ ವರ್ಗಾಯಿಸಿದೆ.

ಈ ಪ್ರಕರಣವನ್ನು ಚನ್ನಪಟ್ಟಣ ಗ್ರಾಮಾಂತರ ‌ಪೊಲೀಸರು ತನಿಖೆ ನಡೆಸುತ್ತಿದ್ದರು. ಆದರೆ ಇದೀಗ ಸಿಐಡಿಗೆ ಹಸ್ತಾಂತರಿಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಐಡಿ ಡಿವೈಎಸ್ಪಿ ಮಲ್ಲಿಕಾರ್ಜುನ್ ನೇತೃತ್ವದ ತಂಡ ಚನ್ನಪಟ್ಟಣಕ್ಕೆ ಭೇಟಿ ನೀಡಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದರು. ಜೊತಗೆ ಪ್ರಕರಣಕ್ಕೆ ಸಂಬಂಧಿಸಿದ‌ ಕಡತಗಳನ್ನು ಸ್ಥಳೀಯ ಪೊಲೀಸರಿಂದ ಪಡೆದುಕೊಂಡರು. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಈಗಾಗಲೇ ಆರೋಪಿಗಳಾದ ಮುರುಗೇಶನ್, ಆತನ ಪತ್ನಿ ರಾಧಾ, ಪ್ರಭಾಕರ್‌ ಹಾಗೂ ಮದನ್ ಕುಮಾರ್ ಅವರನ್ನು ಬಂಧಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *