ನವದೆಹಲಿ: ಮಹಾದೇವ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ನಟಿ ಶ್ರದ್ಧಾ ಕಪೂರ್ ಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ .
ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯಗಾರ ಕಪಿಲ್ ಶರ್ಮಾ, ಹಿಮಾ ಖುರೆಷಿ ಹಾಗೂ ಹೀನಾ ಖಾನ್ ಗೆ ಈಗಾಗಲೇ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈಗಾಗಲೆ ನಟ ರಣಬೀರ್ ಕಪೂರ್ ಅವರಿಗೂ ಕೂಡ ಇಡಿ ಸಮನ್ಸ್ ಜಾರಿ ಮಾಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಸೂಚಿಸಿದ್ದಾರೆ.