ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ: ಪ್ರಕರಣ ದಾಖಲು

ಬೆಳಗಾವಿ: ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಹಲ್ಲೆ ನಡೆಸಿರುವ ಆರೋಪ ಇದೆ.

ಈ ಪ್ರಕರಣ ಸಂಬಂಧ ಹಲ್ಲೆಗೊಳಗಾದ ಮಹಿಳೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಭೀಮಾಶಂಕರ್​​ ಅವರಿಗೆ ದೂರು ನೀಡಿದ್ದಾರೆ. ಆರೋಪಿಗಳಾದ ಕಲ್ಲಪ್ಪ ಡೊಂಕನ್ನವರ್, ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ್, ಸಾಧಿಕ್, ಇಸ್ಮಾಯಿಲ್ ಸೇರಿ 20 ಜನರ ಮೇಲೆ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನಲೆ: ಹಲ್ಲೆಗೊಳಗಾದ ಮಹಿಳೆಯ ಜಮೀನಿನಲ್ಲಿ ಪೈಪ್​​ಲೈನ್​​ವೊಂದು ಹಾದುಹೋಗಿತ್ತು. ​ಪೈಪ್​​ಲೈನ್​ನಿಂದ ಬೆಳೆಹಾನಿಯಾಗುತ್ತಿದೆ, ಹೀಗಾಗಿ ಇದನ್ನು ತೆರವುಗೊಳಿಸುವಂತೆ ಮಹಿಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ದೂರು ನೀಡಿದ್ದರು. ಹಲವು ಬಾರಿ ಮನವಿ ಮಾಡಿದ್ದರೂ ಗ್ರಾಮ ಪಂಚಾಯಿತಿಯವರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಈ ವಿಚಾರವಾಗಿ ಮಹಿಳೆ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಇದಾದ ಬಳಿಕ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ವಿರುದ್ಧ ಬೈಲಹೊಂಗಲ ಪೊಲೀಸ್​ ಠಾಣೆಯಲ್ಲಿ ಜಾತಿ ನಿಂದನೆ ದೂರು ದಾಖಲಸಿದ್ದನು. ನಂತರ ಮತ್ತೆ ಮಹಿಳೆ ಜೊತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು ಗಲಾಟೆ ಮಾಡಿದ್ದರು. ಈ ವೇಳೆ ತನ್ನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *