ಮುರ್ಮುರನ್ನು ಏಕವಚನದಲ್ಲಿ ಸಂಬೋಧನೆ: ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದು

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು ಎಂದು ಹೇಳಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು. ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

 

 

 

Font Awesome Icons

Leave a Reply

Your email address will not be published. Required fields are marked *