ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಭಟ್‌ಗೆ ಜಾಮೀನು

ಬೆಂಗಳೂರು: ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್​ ಸೂಚಿಸಿದೆ.

ತಮ್ಮ ವಿರುದ್ಧ ಎಫ್​ಐಆರ್ ರದ್ದು ಕೋರಿ ಕಲ್ಲಡ್ಕ ಪ್ರಭಾಕರ್ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿದೆ. ಸರ್ಕಾರದ ಪರ ಎಸ್​ಪಿಪಿಗೆ ನ್ಯಾಯಮೂರ್ತಿ ರಾಜೇಶ್ ರೈ ಅವರು ಸೂಚಿಸಿದ್ದಾರೆ.

ಇದರೊಂದಿಗೆ ಲ್ಲಡ್ಕ ಪ್ರಭಾಕರ್​ ಭಟ್​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಇದನ್ನು ರದ್ದುಗೊಳಿಸುವಂತೆ ಸೂಚಿಸಬೇಕೆಂದು ಹೈಕೋರ್ಟ್​ಗೆ ಕಲ್ಲಡ್ಕ ಪ್ರಭಾಕರ್ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿ ರಾಜೇಶ್ ರೈ, ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *