ಮೃತರ ಕುಟುಂಬಸ್ಥರನ್ನು ಭೇಟಿ ಮಾಡಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಶ್

ಹುಬ್ಬಳ್ಳಿ: ಯಶ್ ಹುಟ್ಟುಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಈಗ ಮೂವರ ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿ ಮಾಡಲು  ನಟ ಯಶ್ ಗದಗಕ್ಕೆ ತೆರಳಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ. ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ. ಗಾಯಾಳುಗಳನ್ನು ಲಕ್ಷ್ಮೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ರಸ್ತೆ ಮಾರ್ಗವಾಗಿ ಲಕ್ಷ್ಮೇಶ್ವರಕ್ಕೆ ಯಶ್ ತೆರಳುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *