ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು: ಜಾಲಹಳ್ಳಿ ಮೆಟ್ರೋ ಸ್ಟೇಷನ್​ನಲ್ಲಿ ಓರ್ವ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಹಳಿ ಮೇಲೆ ಜಿಗಿದಿರುವಂತಹ ಘಟನೆ ಸಂಭವಿಸಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನ ಸ್ಥಿತಿ ಗಂಭೀರವಾಗಿದ್ದು, ಮೆಟ್ರೋ ಸಿಬ್ಬಂದಿಗಳು ಆ್ಯಂಬುಲೆನ್ಸ್​ನಲ್ಲಿ ಕರೆದೊಯ್ದು ಯಶವಂತಪುರದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಹಿನ್ನೆಲೆ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಮೆಟ್ರೊ ಹಳಿಗೆ ಧುಮುಕಿದ ಯುವಕನ ಹೆಸರು ಶ್ಯಾರೊನ್ (23). ಕೇರಳ ಮೂಲದವನು. ಸ್ನೇಹಿತನ ಜೊತೆ ಜಾಲಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ. ಮೆಜೆಸ್ಟಿಕ್​ಗೆ ಹೋಗಲು ಟಿಕೆಟ್ ಸಹ ಪಡೆದುಕೊಂಡಿದ್ದ. ಮೆಟ್ರೊ ಟ್ರೈನ್ ಬಂದಾಗ ಏಕಾಏಕಿ ಹಳಿಗೆ ಶ್ಯಾರೊನ್ ಧುಮುಕಿದ್ದಾನೆ.

ಅಬ್ಬಿಗೆರೆ ಬಳಿ ಐಟಿಐ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕಂಪನಿಯವರೇ ರೂಂ ಸಹ ಮಾಡಿಕೊಟ್ಟಿದ್ದರು. ಇಂದು ಸಂಜೆ ಸ್ನೇಹಿತನ ಜೊತೆ ಬಂದು ಉದ್ದೇಶಪೂರ್ವಕವಾಗಿ ಹಳಿಗೆ ಧುಮುಕಿದ್ದಾನೆ. ಸದ್ಯ ಯುವಕನ ಸ್ಥಿತಿ ಗಂಭೀರವಾಗಿದ್ದು, ಸಪ್ತಗಿರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Font Awesome Icons

Leave a Reply

Your email address will not be published. Required fields are marked *