ಮೈಶುಗರ್ ಮಾಜಿ ಅಧ್ಯಕ್ಷನ ವಿರುದ್ಧ ಭ್ರಷ್ಟಾಚಾರ ಆರೋಪ : ಕ್ರಮಕ್ಕೆ ಮುಂದಾದ ಸರ್ಕಾರ

ಮಂಡ್ಯ: ಮೈಶುಗರ್ ಮಾಜಿ ಅಧ್ಯಕ್ಷ ನಾಗರಾಜಪ್ಪ ಅವರ ವಿರುದ್ಧ ನೂರಾರು ಕೋಟಿ ಭ್ರಷ್ಟಾಚಾರ ಆರೋಪ ಸಾಬೀತಾಗಿದೆ. ಹೀಗಾಗಿ ರಾಜ್ಯ ಸರ್ಕಾರ ನಷ್ಟದ ಹಣ ವಸೂಲಿ ಮಾಡಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ​ದಾಖಲಿಸಲು ನಿರ್ಧಾರಿಸಿದೆ.

2008ರಲ್ಲಿ ಬಿಎಸ್​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವರ ಕಾಲದಲ್ಲಿ ನಾಗರಾಜಪ್ಪ ಮೈಶುಗರ್ ಕಾರ್ಖಾನೆ ಅಧ್ಯಕ್ಷರಾಗಿದ್ದರು. ನಾಗರಾಜಪ್ಪ ಯಡಿಯೂರಪ್ಪ ಅವರ ಪರಮಾಪ್ತರಾಗಿದ್ದಾರೆ. ನಾಗರಾಜಪ್ಪ ಅವರು ಹೊಸ ಮಿಲ್ ಖರೀದಿ, ಡಿಸ್ಟಿಲರಿ ಮಾರಾಟ-ಸೋರಿಕೆ, ಮೈ ರಮ್, ಮೈ ವಿಸ್ಕಿ, ಸಕ್ಕರೆ ಮಾರಾಟದಲ್ಲಿ ಅಕ್ರಮ ಎಸಗಿದ್ದಾರೆ
ಎಂದು ತಿಳಿದಿದೆ.

ನಾಗರಾಜಪ್ಪ ಮೈಶುಗರ್ ಅಧ್ಯಕ್ಷರಾಗಿದ್ದ ಕಾರ್ಖಾನೆಗೆ 121 ಕೋಟಿ ರೂ. ನಷ್ಟವಾಗಿತ್ತು ಎಂಬ ಆರೋಪ ಇತ್ತು.

ಈ ಪ್ರಕರಣಕ್ಕೆ ಸಂಬಂಧಿಸದಂತೆ ಸದಾನಂದಗೌಡ ನೇತೃತ್ವದ ಸರ್ಕಾರ ಲೋಕಾಯುಕ್ತ ತನಿಖೆಗೆ ವಹಿಸಿತ್ತು. ಲೋಕಾಯುಕ್ತ ತನಿಖೆ ವೇಳೆ ಅಕ್ರಮ, ಭ್ರಷ್ಟಾಚಾರ ಆರೋಪ ಸಾಬೀತಾಯಿತು. ನಾಗರಾಜಪ್ಪರಿಂದ ನಷ್ಟದ ಹಣ ವಸೂಲಿ ಮಾಡಿ, ಸಿವಿಲ್ ಪ್ರಕರಣ ದಾಖಲಿಸಲು ಲೋಕಾಯುಕ್ತ ಆದೇಶಿಸಿತ್ತು.

ಲೋಕಾಯುಕ್ತ ನ್ಯಾಯಾಧೀಶರ ಆದೇಶ ಪಾಲಿಸಲು ಈ ಹಿಂದಿನ ಸರ್ಕಾರ ಹಿಂದೇಟು ಹಾಕಿದ್ದವು, ಆದರೆ ಹಾಲಿ ಸರ್ಕಾರ ಪ್ರಕರಣ ದಾಖಲಿಸಲು ಮುಂದಾಗಿದೆ.

Font Awesome Icons

Leave a Reply

Your email address will not be published. Required fields are marked *