ಪೃಥ್ವಿರಾಜ್ ಸುಕುಮಾರನ್ ನಟಿಸಿರುವ ಬರೋಬ್ಬರಿ 16 ವರ್ಷಗಳ ಹಿಂದೆ ಪ್ರಾರಂಭವಾದ ಸಿನಿಮಾ ಬಹುನಿರೀಕ್ಷಿತ ಸಿನಿಮಾ ‘ಆಡುಜೀವಿತಂ’ ಮಾರ್ಚ್ 28ಕ್ಕೆ ಬಿಡುಗಡೆ ಆಗಿದ್ದು, ಮೊದಲ ದಿನ ಸಿನಿಮಾ ಮಾಡಿದ ಕಲೆಕ್ಷನ್ ಎಷ್ಟು? ಇಲ್ಲಿದೆ ಮಾಹಿತಿ.
ಕನ್ನಡ ಸೇರಿದಂತೆ ಇನ್ನೂ ಕೆಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಿದ್ದ ‘ಆಡುಜೀವಿತಂ’ ಸಿನಿಮಾ ಮೊದಲ ದಿನ ಏಳು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಗುರುವಾರದಂದು 7.45 ಕೋಟಿ ಗಳಿಕೆ ಮಾಡಿದ ಸಿನಿಮಾ ವಾರಾಂತ್ಯಕ್ಕೆ ಗಳಿಕೆಯನ್ನು ಹೆಚ್ಚಿಸಿಕೊಳ್ಳುವ ಎಲ್ಲ ಸಾಧ್ಯತೆಗಳು ಇವೆ.
ಸ್ಟಾರ್ ನಟರ ಮಾಸ್, ಕಮರ್ಶಿಯಲ್ ಸಿನಿಮಾಗಳಿಗೆ ಹೋಲಿಸಿದರೆ ಇದು ಕಡಿಮೆ ಅನಿಸಬಹುದು. ಆದರೆ ಮಲಯಾಳಂ ಸಿನಿಮಾ ಒಂದಕ್ಕೆ ಇದು ಬಹಳ ಉತ್ತಮ ಆರಂಭ.
ಸಿನಿಮಾ ಕರ್ನಾಟಕ ಹಾಗೂ ತೆಲುಗು ರಾಜ್ಯಗಳಿಂದ ತಲಾ 40 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ತಮಿಳುನಾಡಿನಲ್ಲಿ 55 ಲಕ್ಷ ಗಳಿಸಿದ್ದರೆ ಹಿಂದಿಯಿಂದ ಬಂದಿರುವ ಗಳಿಕೆ ಕೇವಲ 10 ಲಕ್ಷ ರೂಪಾಯಿ. ಇನ್ನುಳಿದದ್ದೆಲ್ಲ ಕೇರಳದಿಂದಲೇ ಬಂದಿದೆ.
‘ಆಡುಜೀವಿತಂ’ ಸಿನಿಮಾ ಅದೇ ಹೆಸರಿನ ಮಲಯಾಳಂ ಕಾದಂಬರಿ ಆಧರಿಸಿದ್ದಾಗಿದೆ. ನೈಜ ಘಟನೆಯನ್ನು ಆಧರಿಸಿ ಕಾದಂಬರಿಯನ್ನು ರಚಿಸಲಾಗಿದೆ. ಕೇರಳದ ವ್ಯಕ್ತಿಯೊಬ್ಬ ಆತನ ಇಚ್ಛೆಗೆ ವಿರುದ್ಧವಾಗಿ ಗಲ್ಫ್ ರಾಷ್ಟ್ರವೊಂದರಲ್ಲಿ ಕುರಿ ಕಾಯುವ ಕೆಲಸಕ್ಕೆ ಸೇರಿ, ಅಲ್ಲಿಂದ ತಪ್ಪಿಸಿಕೊಂಡು ಬರುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.