ಮೋದಿ ರೋಡ್ ಶೋದಲ್ಲಿ ಮಾತ್ರ ಭಾಗಿ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮಂಗಳೂರು : 2024ರ ಲೋಕಸಭಾ ಚುನಾವಣೆಗೆ ಕೇಂದ್ರದ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಸತತ ಮೂರನೇ ಬಾರಿಗೆ ಗದ್ದುಗೆ ಏರಲು ಬಿಜೆಪಿ ಪ್ರಯತ್ನದಲ್ಲಿದೆ. ಕರ್ನಾಟಕದ ಕಡೆಗೆ ಮತ್ತೆ ಪ್ರಧಾನಿ ಮೋದಿ ಆಗಮಿಸುವ ತಯಾರಿಯಲ್ಲಿದ್ದಾರೆ.

ಇನ್ನು ಏಪ್ರಿಲ್ 14ರಂದು ಅಪರಾಹ್ನ ಪ್ರಧಾನಿ ಮೋದಿ ಅವರು ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಬದಲಾವಣೆಯಾಗಿದ್ದು ಅಂದಿನ ಮೋದಿ ಸಮಾವೇಶ ರದ್ದಾಗಿದೆ.

ಪ್ರಧಾನಿಯವರು ಏಪ್ರಿಲ್ 6ರಂದು ಸಂಜೆ ಮಂಗಳೂರಿನಲ್ಲಿ ರೋಡ್ ಶೋ ಮಾತ್ರ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

 

 

Font Awesome Icons

Leave a Reply

Your email address will not be published. Required fields are marked *