ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ದರೇ ಒದ್ದು ಒಳಗೆ ಹಾಕುತ್ತೇವೆ- ಡಿಸಿಎಂ ಡಿ.ಕೆ ಶಿವಕುಮಾರ್. – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

ಬೆಂಗಳೂರು,ಫೆಬ್ರವರಿ,28,2024(www.justkannada.in): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ ಬಳಿಕ ಪಾಕ್ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ  ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್,  ಯಾರೂ ಕೂಡ ಪಾಕ್ ಪರ ಘೋಷಣೆ ಕೂಗಿಲ್ಲ ಯಾರೂದರೂ ಕೂಗಿದ್ದರೇ ಅವರನ್ನ  ಒದ್ದು ಒಳಗೆ ಹಾಕುತ್ತೇವೆ ಎಂದು ತಿಳಿಸಿದರು.

ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಈ ವಿಚಾರದಲ್ಲಿ ರಾಜಕೀಯ ಮಾಡಿ ಗೊಂದಲ ಸೃಷ್ಠಿಸಲು ಯತ್ನಿಸಲಾಗುತ್ತಿದೆ.   ಯಾರೆಲ್ಲಾ ಸುಳ್ಳು ಸುದ್ದಿ ಹಬ್ಬಿಸಿದ್ದಾರೋ ಅವರ ವಿರುದ್ದವೂ ಕ್ರಮ ಆಗಲಿದೆ ಎಂದು  ಡಿ.ಕೆ ಶಿವಕುಮಾರ್ ಹೇಳಿದರು.

Key words: shouting- pro-Pak -slogans – action-DCM -DK Shivakumar.

Font Awesome Icons

Leave a Reply

Your email address will not be published. Required fields are marked *