ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿಕೊಂಡ ಬಾಲಿವುಡ್ ನಟಿ

ಪ್ಯಾಲೆಸ್ತೀನ್: ಉಗ್ರಗಾಮಿ ಗುಂಪು ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಇಬ್ಬರ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಭಾರತದ ಚಿತ್ರರಂಗಕ್ಕೆ ಆತಂಕದ ಸುದ್ದಿಯೊಂದು ಹೊರಬಿದ್ದಿದೆ. ಬಾಲಿವುಡ್ ನಟಿ ನುಶ್ರತ್ ಭರುಚಾ ಅವರು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಪ್ಯಾರ್‌ ಕಾ ಪಂಚನಾಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನುಶ್ರತ್‌ ಬರೂಚಾ ನಟಿಸಿದ್ದರು. ನುಶ್ರತ್ ಭರುಚಾ ತಂಡದ ಸದಸ್ಯರ ಹೇಳಿಕೆಯೊಂದರಲ್ಲಿ “ನುಶ್ರತ್ ದುರದೃಷ್ಟವಶಾತ್ ಇಸ್ರೇಲ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಹೈಫಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದರು. ನಾವು ಅವರೊಂದಿಗೆ ಕೊನೆಯ ಬಾರಿಗೆ ಶನಿವಾರ ಮಧ್ಯಾಹ್ನ ಸುಮಾರು 12.30 ಕ್ಕೆ ಮಾತನಾಡಿದ್ದೇವೆ” ಎಂದು ಹೇಳಿದ್ದಾರೆ.

ಶನಿವಾರ ಮಧ್ಯಾಹ್ನ 12.30 ರ ವರೆಗೂ ಅವರು ನೆಲಮಾಳಿಗೆಯಲ್ಲಿ ಸುರಕ್ಷಿತವಾಗಿದ್ದರು. ಸುರಕ್ಷತಾ ಕ್ರಮಗಳಿಗಾಗಿ, ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದಿಲ್ಲ. ಆದರೆ, ಆದಾದ ಬಳಿಕ ಮತ್ತೆ ಸಂಪರ್ಕ ಸಾಧ್ಯವಾಗುತ್ತಿಲ್ಲ. ನಾವು ನುಶ್ರತ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗಿಸಲು ಪ್ರಯತ್ನಿಸುತ್ತಿದ್ದೇವೆ. ಅವರು ಉತ್ತಮ ಆರೋಗ್ಯ ಮತ್ತು ಯಾವುದೇ ಕಷ್ಟಕ್ಕೆ ಒಳಗಾಗದೆ ಹಿಂತಿರುಗುತ್ತಾರೆ ಎಂದು ಭಾವಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *