ರಜನಿಕಾಂತ್ ‘ಜೈಲರ್’ ಸಿನಿಮಾ ಟಿಕೆಟ್ ಬುಕಿಂಗ್ ಶುರು

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಕರ್ನಾಟಕದಲ್ಲೂ ದೊಡ್ಡಮಟ್ಟದಲ್ಲಿ ತೆರೆಗಪ್ಪಳಿಸುತ್ತಿದೆ. ಈಗಾಗಲೇ ಬೆಂಗಳೂರಿನಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು ಪ್ರೇಕ್ಷಕರು ಟಿಕೆಟ್ ಕಾಯ್ದಿರಿಸಲು ಮುಗಿಬಿದ್ದಿದ್ದಾರೆ. ಕರ್ನಾಟಕದಲ್ಲೂ ರಜನಿಕಾಂತ್‌ಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಲ್ಲೂ ಸಿಕ್ಕಾಪಟ್ಟೆ ಗ್ರ್ಯಾಂಡ್ ಆಗಿ ಸಿನಿಮಾ ರಿಲೀಸ್ ಆಗಲಿದೆ. ಈಗಾಗಲೇ 48 ತಮಿಳು ಹಾಗೂ 1 ಕನ್ನಡ ಶೋ ಟಿಕೆಟ್ ಬುಕ್ಕಿಂಗ್ ಓಪನ್ ಆಗಿದೆ.

ಆಕ್ಷನ್ ಎಂಟರ್‌ಟೈನರ್ ‘ಜೈಲರ್’ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡ ನಟ ಶಿವರಾಜ್‌ಕುಮಾರ್, ಮಲಯಾಳಂ ನಟ ಮೋಹನ್‌ ಲಾಲ್ ಅತಿಥಿ ಪಾತ್ರಗಳಲ್ಲಿ ನಟಿಸಿರುವುದು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ರಮ್ಯಾಕೃಷ್ಣ, ತಮನ್ನಾ, ಜಾಕಿಶ್ರಾಫ್ ಹೀಗೆ ಬಹುಬೇಡಿಕೆಯ ಕಲಾವಿದರು ಸಿನಿಮಾದಲ್ಲಿದ್ದಾರೆ. ಈಗಾಗಲೇ ಸಿನಿಮಾ ಸಾಂಗ್ಸ್ ಮತ್ತು ಟ್ರೈಲರ್ ರಿಲೀಸ್ ಆಗಿ ಹಿಟ್ ಆಗಿದೆ. ಹಾಗಾಗಿ ಸಹಜವಾಗಿಯೇ ಸಿನಿಮಾ ಹೈಪ್ ಕ್ರಿಯೇಟ್ ಮಾಡ್ತಿದೆ.

ಅಮೆರಿಕಾದಲ್ಲಿ ಟಿಕೆಟ್ ಬುಕ್ಕಿಂಗ್ ಆದ ಕೆಲವೇ ಗಂಟೆಗಳಲ್ಲಿ ಶೋ ಫುಲ್ ಆಗಿದೆ. ಚೆನ್ನೈನಲ್ಲಿ ಇಂದು ಸಂಜೆಯಿಂದ ಬುಕ್ಕಿಂಗ್ ಶುರುವಾಗಲಿದೆ ಎನ್ನಲಾಗ್ತಿದೆ. ಆಗಸ್ಟ್ 10ರಂದು ಬಿಡುಗಡೆಯಾಗಲಿರುವ ರಜನಿಕಾಂತ್ ಅಭಿನಯದ ಜೈಲರ್ ಚಿತ್ರಕ್ಕೆ ದೇಶ ಅಷ್ಟೇ ಅಲ್ಲದೇ ವಿದೇಶದಲ್ಲೂ ಭಾರೀ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.

Font Awesome Icons

Leave a Reply

Your email address will not be published. Required fields are marked *