ರಾಘವ, ಕಂಗನಾ ನಟನೆಯ ಚಂದ್ರಮುಖಿ‌-2 ಟ್ರೈಲರ್ ರಿಲೀಸ್

ರಾಘವ ಲಾರೆನ್ಸ್, ಕಂಗನಾ ರಣಾವತ್ ನಟನೆಯ ಚಂದ್ರಮುಖಿ 2 ಸಿನಿಮಾದ ಟ್ರೈಲರ್ ಸೆ. 3ರಂದು ರಿಲೀಸ್ ಆಗಿದೆ. ಸೆ.15ಕ್ಕೆ ಚಂದ್ರಮುಖಿ 2 ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದ್ದು, ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಂದ್ರಮುಖಿ ಕಥೆಗೆ 17 ವರ್ಷಗಳ ನಂತರ ಹೊಸ ತಿರುವು ಸಿಗುತ್ತದೆ. 200 ವರ್ಷಗಳಷ್ಟು ಹಳೆಯದಾದ ಚಂದ್ರಮುಖಿ ಮತ್ತು ರಾಜ ವೆಟ್ಟೈಯನ್ ಅವರ ಸೇಡಿನ ಕಥೆ. ಈ ಕಥೆಯನ್ನು ವರ್ತಮಾನಕ್ಕೆ ಹೊಂದಿಸಿರುವುದನ್ನು ಟ್ರೈಲರ್‌ನಲ್ಲಿ ನೋಡಬಹುದಾಗಿದೆ.

ಪಿ. ವಾಸು ನಿರ್ದೇಶನದ ಚಂದ್ರಮುಖಿ 2ನಲ್ಲಿ ರಾಘವ ಲಾರೆನ್ಸ್, ಕಂಗನಾ, ರಾಧಿಕಾ ಶರತ್ ಕುಮಾರ್, ವಡಿವೇಲು, ಲಕ್ಷ್ಮಿ ಮೆನನ್ ಸೇರಿದಂತೆ ಹಲವರು ನಟಿಸಿದ್ದಾರೆ. ಚಿತ್ರಕ್ಕೆ ಆಸ್ಕರ್ ವಿಜೇತ ಎಂ.ಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಈಗಾಗಲೇ ಟ್ರೈಲರ್ 1ಮಿಲಿಯನ್ ವೀಕ್ಷಣೆ ಕಂಡಿದೆ.

Font Awesome Icons

Leave a Reply

Your email address will not be published. Required fields are marked *