ರಾಜಕೀಯಕ್ಕೆ ದಳಪತಿ ವಿಜಯ್‌ ಎಂಟ್ರಿ: ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಘೋಷಣೆ!

ಚೆನ್ನೈ (ಫೆ.2): ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ.. ಲೋಕಸಭೆ ಚುನಾವಣೆಗೆ ಕೆಲ ತಿಂಗಳು ಮೊದಲು ‘ತಮಿಳಗ ವೆಟ್ರಿ ಕಳಗಂ’ ಎಂಬ ಹೆಸರಿನ ತಮ್ಮ ರಾಜಕೀಯ ಪಕ್ಷವನ್ನು ಶುಕ್ರವಾರ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಹೇಳಿಕೆ ಪ್ರಕಟ ಮಾಡಿರುವ ನಟ, “ನಾವು ನಮ್ಮ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಅನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ, ಮುಂಬರುವ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ. ಇದನ್ನೇ ಜನರು ಬಯಸಿದ್ದಾರೆ’ ಎಂದು ಹೇಳಿದ್ದಾರೆ.

Font Awesome Icons

Leave a Reply

Your email address will not be published. Required fields are marked *