ರಾಜ್ಯದಲ್ಲಿಂದು 158 ಜನರಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವವಾಡುವ ಸುಳಿವು ನೀಡಿದೆ. ಕೆಲ ದಿನಗಳಿಂದ ದಿನಕ್ಕೆ ಪಾಸಿಟಿವ್ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಂದು 158 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದರೆ, ಬೆಂಗಳೂರಿನಲ್ಲಿ ಇಂದು ಒಂದೇ ದಿನಕ್ಕೆ 85 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಅಲ್ಲಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.98ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8350 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 568 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

69 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರು 12, ದಕ್ಷಿಣ ಕನ್ನಡ 8, ಚಾಮರಾಜನಗರ 7, ವಿಜಯನಗರ 6, ಮಂಡ್ಯ 5, ರಾಮನಗರ 5, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಂದು 5, ಬಳ್ಳಾರಿ 4, ಶಿವಮೊಗ್ಗ 4, ಚಿಕ್ಕಮಗಳೂರು 3, ಕೋಲಾರ 3, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನ, ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಯಲ್ಲಿ ತಲಾ 1 ಕೊರೊನಾ ಕೇಸ್ ಪತ್ತೆ ಆಗಿದೆ.

Font Awesome Icons

Leave a Reply

Your email address will not be published. Required fields are marked *