ರಾಜ್ಯದಲ್ಲಿ ಇಂದು 201 ಜನರಿಗೆ ಕೊರೊನಾ ಸೋಂಕು ದೃಢ: ಓರ್ವ ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 201 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 39 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಒಟ್ಟು 7060 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ. ಮೈಸೂರಿನಲ್ಲಿ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. 60 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.84 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Font Awesome Icons

Leave a Reply

Your email address will not be published. Required fields are marked *