ರಾಜ್ಯದ ಹಲವೆಡೆ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದ್ದು, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಮಾಹಿತಿ ಲಭಿಸಿದೆ.

ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಕೆಲವು ಕಡೆಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Font Awesome Icons

Leave a Reply

Your email address will not be published. Required fields are marked *