ರಾಜ್ಯ ಸರ್ಕಾರಕ್ಕೆ ನೂರು ದಿನ: ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

ಮೈಸೂರು, ಆಗಸ್ಟ್ 27, 08,2023 (www.justkannada.in):: ರಾಜ್ಯ ಸರ್ಕಾರ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಖುಷಿ ಹಂಚಿಕೊಂಡಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು,ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ.

ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ.  ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ಟ್ವೀಟ್ ಮಾಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *