ರಾಜ್ಯ ಸರ್ಕಾರದ ಯೋಜನೆಗಳು ಶಾಶ್ವತವಲ್ಲ; ಹೆಚ್.ಡಿ.ದೇವೇಗೌಡ

ಹೊಳೆನರಸೀಪುರ: ಪತ್ರಿಕೆಗಳಲ್ಲಿ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳ ಜಾಹಿರಾತಿಗೆ ಹಣ ಪೋಲು ಮಾಡುವ ರಾಜ್ಯ ಸರ್ಕಾರದ ಯೋಜನೆಗಳು ಶಾಶ್ವತವಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.

ಹೊಳೆನರಸೀಪುರದ ಬಾಗಿವಾಳು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ೨೬ನೇ ತಾರೀಕು ನಡೆಯುವ ಲೋಕಸಭೆಯ ಚುನಾವಣೆಯಲ್ಲಿ ನಮ್ಮ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವಂತೆ ಅವರು ಕರೆ ನೀಡಿದರು.

ಮುಂದೆ ಈ ದೇಶದ ಪ್ರಧಾನಮಂತ್ರಿಯಾಗುವ ಶ್ರೀ ನರೇಂದ್ರ ಮೋದಿ ಅವರನ್ನು ನಾವೆಲ್ಲರೂ ಬೆಂಬಲಿಸಬೇಕು. ನರೇಂದ್ರ ಮೋದಿಗೆ ಬೆಂಬಲ ಸಿಗಬೇಕು ಎಂದರೆ ನೀವೆಲ್ಲರೂ ಮತದಾರ ಬಂಧುಗಳು, ತಂದೆ ತಾಯಿಯಂದಿರು ಯುವಕರು ಪ್ರಜ್ವಲ್ ರೇವಣ್ಣ ಅವರನ್ನು ಚುನಾ ಯಿಸಿ ಗೆಲ್ಲಿಸಿ ಎಂದರು.

ಈ ಸಂದರ್ಭದಲ್ಲಿ ದೇವೇಗೌಡರು ರಾಜ್ಯದ ಉಪಮುಖ್ಯಮಂತ್ರಿಯಾಗಿರುವವರು ಸುಮಾರು ಐದು ರಾಜ್ಯಗಳ ಚುನಾವಣೆಗೆ ಬೆಂಗಳೂರಿನಿಂದ ಹಣವಸೂಲು ಮಾಡುತ್ತಿದ್ದಾರೆ ಎಂದು ಕುಟುಕಿದರು. ಕಾರ್ಯಕ್ರಮದಲ್ಲಿ ಸಾವಿರಾರು ನಾಗರಿಕರು ಹಾಗೂ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *