ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನನ್ನು ಆಹ್ವಾನಿಸಿಲ್ಲ: ಸಿಎಂ

ಕೊಪ್ಪಳ: ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನನನ್ನು ಇನ್ನೂ ಆಹ್ವಾನಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಕೊಪ್ಪಳದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ದೇಶದ ಹಲವಾರು ಪ್ರಮುಖ ವ್ಯಕ್ತಿಗಳು ಮತ್ತು ರಾಜಕೀಯ ನಾಯಕರನ್ನು ಈ ಮಹಾ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿದೆ. ಆದರೆ ಇಂದಿನವರೆಗೂ ನನಗೆ ಯಾವುದೇ ಆಹ್ವಾನ ಬಂದಿಲ್ಲ, ಆಹ್ವಾನ ಬಂದ ನಂತರ ಆ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ.

Font Awesome Icons

Leave a Reply

Your email address will not be published. Required fields are marked *